Library-logo-blue-outline.png
View-refresh.svg
Transclusion_Status_Detection_Tool

ಅನ್ನದಾನಿ, ವಸ್ತ್ರದಾನಿ, ಹಿರಣ್ಯದಾನಿಗಳ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅನ್ನದಾನಿ
ವಸ್ತ್ರದಾನಿ
ಹಿರಣ್ಯದಾನಿಗಳ ಮನೆಯ ಬಾಗಿಲ ಕಾದಿಪ್ಪರಯ್ಯಾ ಬಹುವಿಧದ ವೇಷಧಾರಿಗಳು. ``ವಯೋವೃದ್ಧಾಸ್ತಪೋವೃದ್ಧಾ ವೇದವೃದ್ಧಾ ಬಹುಶ್ರುತಾಃ ಸರ್ವೇ ತೇ ದಾನಿವೃದ್ಧಸ್ಯ ದ್ವಾರೇ ತಿಷ್ಠಂತಿ ಕಿಂಕರಾಃ _ಎಂದುದಾಗಿ ದೈನ್ಯವ ಬಿಟ್ಟಿಪ್ಪ ನಿರಾಭಾರಿಯ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ