ಅನ್ಯದೈವವ ಬಿಟ್ಟುದಕ್ಕೆ ಆವುದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನ್ಯದೈವವ ಬಿಟ್ಟುದಕ್ಕೆ ಆವುದು ಕ್ರಮವೆಂದರೆ: ಅನ್ಯದೈವವ ಮನದಲ್ಲಿ ನೆನೆಯಲಾಗದು
ಅನ್ಯದೈವವ ಮಾತನಾಡಲಾಗದು. ಅನ್ಯದೈವದ ಪೂಜೆಯ ಮಾಡಲಾಗದು. ಸ್ಥಾವರಲಿಂಗಕ್ಕೆರಗಲಾಗದು. ಆ ಲಿಂಗ ಪ್ರಸಾದವ ಕೊಳಲೆಂತೂ ಬಾರದು. ಇಷ್ಟು ನಾಸ್ತಿಯಾದರೆ ಆತ ಅನ್ಯದೈವವ ಬಿಟ್ಟು ಲಿಂಗವಂತನೆನಿಸಿಕೊಂಬನು. ಇವರೊಳಗೆ ಅನುಸರಣೆಯ ಮಾಡಿಕೊಂಡು ನಡೆದನಾದೊಡೆ ಅವಂಗೆ ಕುಂಭೀಪಾತಕ ನಾಯಕನರಕ ತಪ್ಪದು ಕಾಣಾ ಕೂಡಲಚೆನ್ನಸಂಗಯ್ಯ.