ಅನ್ಯವಿಚಾರವ ಮರೆದು ನಿಮ್ಮ ವಿಚಾರವೆಡೆಗೊಂಡಿತ್ತಾಗಿ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅನ್ಯವಿಚಾರವ ಮರೆದು ನಿಮ್ಮ ವಿಚಾರವೆಡೆಗೊಂಡಿತ್ತಾಗಿ

ಪ್ರಾಣದ ನೆಲೆಗೆಟ್ಟಿತ್ತಯ್ಯಾ 
ದಶವಾಯುಗಳ ಸಂಚ ತಪ್ಪಿತ್ತಯ್ಯಾ
ಕರಣಂಗಳ ಲಿಂಗಕಿರಣಂಗಳು ನುಂಗಿದವಯ್ಯಾ
ಒಳಗೆ ಕರತಳಾಮಳಕಗೊಂಡೆನಯ್ಯಾ
ಹೊರಗೆ ಅದೆಂತೆಂದರಿಯದೆ ನೀನೆ ಗತಿಯಾಗಿದ್ದೆ
ಕೂಡಲಸಂಗಮದೇವಾ.