ಅಯ್ಯಾ, ಕ್ರಿಯಾವಿಭೂತಿಯ ಧರಿಸಿದ

ವಿಕಿಸೋರ್ಸ್ದಿಂದ



Pages   (key to Page Status)   


ಅಯ್ಯಾ
ಕ್ರಿಯಾವಿಭೂತಿಯ ಧರಿಸಿದ ಭಕ್ತನು ಚಿದ್ರುದ್ರಾಕ್ಷಿಯ ಧರಿಸಿ ಮಂತ್ರಧ್ಯಾನವ ಮಾಡಬೇಕಾದ ನಿಮಿತ್ತ
ಪ್ರಥಮದಲ್ಲಿ ರುದ್ರಾಕ್ಷಿಮಣಿಗಳ ಕ್ರಮವ ಮಾಡದೆ
ಅವರು ಹೇಳಿದಂತೆ ಕ್ರಯವ ಕೊಟ್ಟು ಮುಖಭಿನ್ನವಾದುದನುಳಿದು
ಸ್ವಚ್ಛವಾದ ರುದ್ರಾಕ್ಷಿಗಳ ಶ್ರೀಗುರುಲಿಂಗಜಂಗಮದ ಸನ್ನಿಧಿಗೆ ತಂದು ವೃತ್ತಸ್ಥಾನದ ಪರಿಯಂತರವು ಧೂಳಪಾದೋದಕವ ಮಾಡಿ
ಆ ರುದ್ರಾಕ್ಷಿಯ ಪೂರ್ವಾಶ್ರಯವ ಕಳೆದು
ಲಿಂಗಧಾರಕಭಕ್ತರಿಂದ ಗುರುಪಾದೋದಕ ಮೊದಲಾಗಿ ಶಿವಪಂಚಾಮೃತದಿಂದ ಇಪ್ಪತ್ತೊಂದು ಪೂಜೆಯ ಮಾಡಿಸಿ ಆಮೇಲೆ ಶ್ರೀಗುರುಲಿಂಗಜಂಗಮದ ಪಾದಪೂಜೆಗೆ ಧರಿಸಿ
ಆಮೇಲೆ ಲಿಂಗಜಂಗಮಕ್ಕೆ ಸಮರ್ಪಿಸಿ
ಅವರಿಂದ ದಯಚಿತ್ತವ ಪಡೆದು
ಶರಣುಹೊಕ್ಕು ಮಹಾಪ್ರಸಾದವೆಂದು ಬೆಸಗೊಂಡು
ಆ ಕರುಣಾಕಟಾಕ್ಷ ಮಾಲೆಗಳ ಭಿನ್ನವಿಟ್ಟು ಅರ್ಚಿಸದೆ
ಅಭಿನ್ನಸ್ವರೂಪು ಮುಂದುಗೊಂಡು ಬಹುಸುಯಿಧಾನದಿಂದ ತನ್ನ ತೊಡೆಯ ಮೇಲೆ ಮೂರ್ತವ ಮಾಡಿಕೊಂಡು
ತನ್ನ ಜ್ಞಾನಪ್ರಕಾಶವೆಂದು ಭಾವಿಸಿ ತನ್ನ ತಾನರ್ಚಿಸಿ
ಮಂತ್ರಧ್ಯಾನಾರೂಢನಾಗಿ ತತ್ತತ್ ಸ್ಥಾನದಲ್ಲಿ ಧರಿಸುವುದಯ್ಯಾ. ಇಂತು ವಿಭೂತಿ ರುದ್ರಾಕ್ಷಿಯ ಧರಿಸಿ ಲಿಂಗನಿಷ್ಠಾಪರನಾದ ಭಕ್ತನು ಸ್ಥಲಮೆಟ್ಟಿಗೆಯಿಂದ ಆಯಾಯ ಮಂತ್ರವ ಹೇಳುವುದಯ್ಯಾ. ಅದರ ವಿಚಾರವೆಂತೆಂದಡೆ: ಕ್ರಿಯಾದೀಕ್ಷಾಯುಕ್ತನಾದ ಉಪಾಧಿಭಕ್ತಂಗೆ ಗುರುಮಂತ್ರವ ಹೇಳುವುದಯ್ಯಾ. ಕ್ರಿಯಾದೀಕ್ಷೆಯ ಪಡೆದು ಗುರುಲಿಂಗಜಂಗಮದಲ್ಲಿ ಅರ್ಥಪ್ರಾಣಾಭಿಮಾನಂಗ? ನಿರ್ವಂಚಕತ್ವದಿಂದ ಸಮರ್ಪಿಸಿ ನಡೆನುಡಿ ಸಂಪನ್ನನಾದ ನಿರುಪಾಧಿಭಕ್ತಂಗೆ ಲಿಂಗಮಂತ್ರವ ಹೇ?ುವುದಯ್ಯಾ ಇವರಿಬ್ಬರ ಆಚರಣೆಯ ಪಡೆದು ಸಮಸ್ತ ಭೋಗಾದಿಗಳು ನೀಗಿಸಿ ಸಚ್ಚಿದಾನಂದನಾದ ಸಹಜಭಕ್ತಂಗೆ ಜಂಗಮಮಂತ್ರವ ಹೇ?ುವುದಯ್ಯಾ. ಆ ಮಂತ್ರಂಗಳಾವುವೆಂದಡೆ: ಶಕ್ತಿಪ್ರಣವ ಹನ್ನೆರಡು ಗುರುಮಂತ್ರವೆನಿಸುವುದಯ್ಯಾ
ಶಿವಪ್ರಣವ ಹನ್ನೆರಡು ಲಿಂಗಮಂತ್ರವೆನಿಸುವುದಯ್ಯಾ
ಶಿವಶಕ್ತಿರಹಿತವಾದ ಹನ್ನೆರಡು ಜಂಗಮಮಂತ್ರವೆನಿಸುವುದಯ್ಯಾ. ಇಂತು ವಿಚಾರದಿಂದ ಉಪಾಧಿ ನಿರುಪಾಧಿ ಸಹಜಭಕ್ತ ಮಹೇಶ್ವರರಾಚರಿಸುವುದಯ್ಯಾ. ಇನ್ನು ನಿರಾಭಾರಿ ವೀರಶೈವನಿರ್ವಾಣ ಸದ್ಭಕ್ತಜಂಗಮಗಣಂಗಳು ಶುದ್ಧಪ್ರಸಾದಪ್ರಣವ ಹನ್ನೆರಡು
ಸಿದ್ಧಪ್ರಸಾದಪ್ರಣವ ಹನ್ನೆರಡು
ಪ್ರಸಿದ್ಧಪ್ರಸಾದಪ್ರಣವ ಹನ್ನೆರಡು
ಇಂತು ವಿಚಾರದಿಂದ ಮೂವತ್ತಾರು ಪ್ರಣವವನೊಡಗೂಡಿ
ಶುದ್ಧಪ್ರಸಾದಪ್ರಣವ ಆಚಾರಲಿಂಗ ಗುರುಲಿಂಗ ಇಷ್ಟಲಿಂಗ ಪರಿಯಂತರ ತ್ರಿವಿಧ ಲಿಂಗಕ್ಕೆಂದು ಮಾಡುವುದಯ್ಯಾ. ಸಿದ್ಧಪ್ರಸಾದಪ್ರಣವ ಶಿವಲಿಂಗ ಜಂಗಮಲಿಂಗ ಪ್ರಾಣಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಪ್ರಸಿದ್ಧಪ್ರಸಾದಪ್ರಣವ ಪ್ರಸಾದಲಿಂಗ ಮಹಾಲಿಂಗ ಭಾವಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಹೀಗೆ ಹರುಕಿಲ್ಲದೆ ಸ್ಥಲಮೆಟ್ಟಿಗೆಯಿಂದ ಕರುಣಿಸಿದ ಗುರುವಿಂಗೆ ಬೆಸಗೊಂಡ ಶಿಷ್ಯೋತ್ತಮಂಗೆ. ಆಯಾಯ ಲಿಂಗಪ್ರಸಾದ ಒದಗುವುದೆಂದಾಂತ ನಮ್ಮ ಕೂಡಲಚೆನ್ನಸಂಗಮದೇವ