ವಿಷಯಕ್ಕೆ ಹೋಗು

ಅಯ್ಯಾ, ಗುರುವರನ ಹೊಂದಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಯ್ಯಾ
ಗುರುವರನ ಹೊಂದಿ ಗುರುಪುತ್ರನಾದ ಬಳಿಕ ಅಕಸ್ಮಾತ್ ಆ ಗುರುವಿನಲ್ಲಿ ಅನಾಚಾರ ದುರಾಚಾರಗಳು ಮೈದೋರಿದಲ್ಲಿ
ಅವು ಸೂಕ್ಷ್ಮವಿದ್ದಡೆ ತಿದ್ದಿಕೊಳ್ಳಬೇಕು
ಸ್ಧೂಲವಿದ್ದಡೆ ಆ ಗುರುವ್ಯಕ್ತಿಯನುಳಿದು ತಾನರಿದ ಗುರುತತ್ವವ ನಂಬಿ ಸದಾಚಾರವ ಸಾಧಿಸುತ್ತಿರಬೇಕು. ಇಂತೀ ಆಚರಣೆಯೆ ನಿಮ್ಮ ಶರಣರಿಗೆ ಸದಾ ಸಮ್ಮತವಾಗಿರ್ಪುದು ಕಾಣಾ ಕೂಡಲಚೆನ್ನಸಂಗಮದೇವಾ.