ವಿಷಯಕ್ಕೆ ಹೋಗು

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲೆನೆನಿಮ್ಮ

ವಿಕಿಸೋರ್ಸ್ದಿಂದ

http://vachana.sanchaya.net/vachanakaaras/1

ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲೆನೆ
ನಿಮ್ಮ ನಿಲವ ನೋಡಿಹೆನೆಂದಡೆನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ,
ಅಂತಿಂತೆಂದುಪಮಿಸಲಮ್ಮದೆ ಇದ್ದೆ ನೋಡಯ್ಯಾ,
ನಿತ್ಯತೃಪ್ತ-ಮಹಿಮಾ, ನಿಮಗೆಂದಳವಡಿಸಿದ ಪದಾರ್ಥವಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ,
ಕೂಡಲಸಂಗಮದೇವಾ.