Library-logo-blue-outline.png
View-refresh.svg
Transclusion_Status_Detection_Tool

ಅಯ್ಯಾ, ಸದಾಚಾರ ಸದ್ಭಕ್ತಿ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಅಯ್ಯಾ
ಸದಾಚಾರ ಸದ್ಭಕ್ತಿ ಸತ್ಕ್ರಿಯಾ ಸಮ್ಯಕ್‍ಜ್ಞಾನ ಸದ್ವರ್ತನೆ ಸಗುಣ ನಿರ್ಗುಣ ನಿಜಗುಣ ಸಚ್ಚರಿತ್ರ ಸದ್ಭಾವ ಅಕ್ರೋಧ ಸತ್ಯವಚನ ಶಮೆದಮೆ ಭವಿಭಕ್ತಭೇದ ಸತ್ಪಾತ್ರದ್ರವ್ಯಾರ್ಪಣ ಗೌರವಬುದ್ಧಿ ಲಿಂಗಲೀಯ ಜಂಗಮಾನುಭಾವ ದಶವಿಧಪಾದೋದಕ ಏಕಾದಶಪ್ರಸಾದ ಷೋಡಶಭಕ್ತಿನಿರ್ವಾಹ
ತ್ರಿವಿಧ ಷಡ್ವಿಧ ನವವಿಧ ಲಿಂಗಾರ್ಚನೆ
ತ್ರಿವಿಧ ಷಡ್ವಿಧ ನವವಿಧ ಜಪ
ತ್ರಿವಿಧ ಷಡ್ವಿಧ ನವವಿಧ ಲಿಂಗಾರ್ಪಣ. ಚಿದ್ವಿಭೂತಿ ಸ್ನಾನ ಧೂಳನ ಧಾರಣ
ಸರ್ವಾಂಗದಲ್ಲಿ ಚಿದ್ರುದ್ರಾಕ್ಷಿಧಾರಣ
ತಾ ಮಾಡುವ ಸತ್ಯಕಾಯಕ
ತಾ ಬೇಡುವ ಸದ್ಭಕ್ತಿಭಿಕ್ಷ
ತಾ ಕೊಟ್ಟು ಕೊಂಬ ಭೇದ
ತಾನಾಚರಿಸುವ ಸತ್ಯ ನಡೆನುಡಿ
ತಾ ನಿಂದ ನಿರ್ವಾಣಪದ. ಇಂತೀ ಬತ್ತೀಸ ನೆಲೆಕಲೆಗಳ ಸದ್ಗುರುಮುಖದಿಂದರಿದ ಬಸವ ಮೊದಲಾದ ಸಮಸ್ತ ಗಣಂಗಳೆಲ್ಲಾ ಪ್ರಮಥ ನಿರಾಭಾರಿ ವೀರಶೈವ ಸನ್ಮಾರ್ಗವಿಡಿದಾಚರಿಸಿದರು ನೋಡಾ. ಇಂತು ಪ್ರಮಥಗಣವಾಚರಿಸಿದ ಸತ್ಯ ಸನ್ಮಾರ್ಗವರಿಯದ ಮೂಢ ಅಧಮರನೆಂತು ಶಿವಶಕ್ತಿ ಶಿವಭಕ್ತ ಶಿವಜಂಗಮವೆಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ ?