ಅಯ್ಯಾ ನಿನ್ನ ಸಂಗದಲ್ಲಿ ಸಂಗಿಯಾದೆ ಅಯ್ಯಾ, ನಿನ್ನ

ವಿಕಿಸೋರ್ಸ್ದಿಂದ



Pages   (key to Page Status)   


ಅಯ್ಯಾ ನಿನ್ನ ಸಂಗದಲ್ಲಿ ಸಂಗಿಯಾದೆ ಅಯ್ಯಾ, ನಿನ್ನ ಸಂಗದಿಂದ ಕಾಕುತನವ ಬಿಟ್ಟು ಬೇಕಾದ ಹಾಂಗೆಯಾದೆ. ಅಯ್ಯಾ, ನಿನ್ನ ಒಲವು ಅನೇಕ ಪ್ರಕಾರದಲ್ಲಿ ಪಸರಿ ಪರ್ಬಿತ್ತು ಎನ್ನ ಸರ್ವಾಂಗದಲ್ಲಿ. ನಿನ್ನವರೊಲುಮೆಯ ಆನಂದವನು ಎನಗೆ ಕರುಣಿಸು ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿಮ್ಮ ಧರ್ಮ. .