ವಿಷಯಕ್ಕೆ ಹೋಗು

ಅಯ್ಯಾ ನಿಮ್ಮ ಶರಣರು ಪರಮಸುಖಿಗಳಯ್ಯಾ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಯ್ಯಾ

ನಿಮ್ಮ ಶರಣರು ಪರಮಸುಖಿಗಳಯ್ಯಾ. ಅಯ್ಯಾ 
ನಿಮ್ಮ ಶರಣರು ಕಾಯವೆಂಬ ಕರ್ಮಕ್ಕೆ ಹೊದ್ದದ ನಿಷ್ಕರ್ಮಿಗಳಯ್ಯಾ. ಅಯ್ಯಾ
ನಿಮ್ಮ ಶರಣರು ಮನದಲ್ಲಿ ನಿರ್ಲೇಪಜ್ಞಾನಿಗಳಯ್ಯಾ. ಕೂಡಲಸಂಗಮದೇವಯ್ಯಾ
ನಿಮ್ಮ ಶರಣರ ಘನವನೆನಗೆ ಹೇಳಲು
ನಾನು ಕೇಳಲಮ್ಮದೆ ನಮೋ ನಮೋ ಎನುತಿರ್ದೆನು ಕಾಣಾ
ಪ್ರಭುವೆ.