ಅಯ್ಯಾ ನೀ ಒಲಿದಡೆ ತಿರಿವಂತೆ ಮಾಡುವಿರಿ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಯ್ಯಾ

ನೀ ಒಲಿದಡೆ ತಿರಿವಂತೆ ಮಾಡುವಿರಿ 
ತಿರಿದಡೆ ನೀಡದಂತೆ ಮಾಡುವಿರಿ
ನೀಡಿದಡೆ ಅಕ್ಕಿ ಬೀಳುವಂತೆ ಮಾಡುವಿರಿ
ಬಿದ್ದಡೆ ನಾಯಿ ತಿಂಬಂತೆ ಮಾಡುವಿರಿ
ನಿಮ್ಮ ಧ್ಯಾನದಲಿ ನಾನಿಪ್ಪಂತೆ ಮಾಡುವಿರಿ ಕೂಡಲಸಂಗಮದೇವಾ.