ವಿಷಯಕ್ಕೆ ಹೋಗು

ಅಯ್ಯ, ಅನುಭಾವವಿಲ್ಲದ ವಿರಕ್ತಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಯ್ಯ
ಅನುಭಾವವಿಲ್ಲದ ವಿರಕ್ತಿ ಆಯುಧವಿಲ್ಲದ ವೀರನಂತೆ. ಅನುಭಾವವಿಲ್ಲದ ಷಟ್‍ಸ್ಥಲವು ಕಣ್ಣಿಲ್ಲದ ಕುರುಡನಂತೆ. ಅನುಭಾವವಿಲ್ಲದ ಜಂಗಮವು ಕಾಲಿಲ್ಲದ ಹೆಳವನಂತೆ. ಅನುಭಾವವಿಲ್ಲದ ಶಿವಪೂಜೆಯ ಎಷ್ಟು ಮಾಡಿದಡೆಯು ಪ್ರಯೋಜನಕ್ಕೆಬಾರದು. ಅನುಭಾವವಿಲ್ಲದವನ ಲಿಂಗಪೂಜೆ ಬರಿಕೈಯಲ್ಲಿ ಹುಡಿಮಣ್ಣ ಹೊಯ್ದುಕೊಂಡಂತೆ. ಇದು ಕಾರಣ: ಭಕ್ತಿಗೆ ವಿರಕ್ತಿಗೆ ಮುಕ್ತಿಗೆ ವೀರಶೈವಕ್ಕೆ ಜಂಗಮಕ್ಕೆ ಅನುಭಾವವಿರಬೇಕು. ಅನುಭಾವವಿಲ್ಲದ ವಿರಕ್ತನಲ್ಲಿ ಪಾದೋದಕ_ಪ್ರಸಾದವ ಕೊಳಲಾಗದು. ಅನುಭಾವವುಳ್ಳ ಆಚಾರಸಂಪನ್ನನಾದ ಸದ್ಭಕ್ತನಲ್ಲಿ ಅನಾದಿ ಪಾದೋದಕ_ಪ್ರಸಾದವ ಕೊಂಡವರು ಪರಮಮುಕ್ತರಾದರಯ್ಯಾ ನಿಜಗುರು ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣಾ.