ವಿಷಯಕ್ಕೆ ಹೋಗು

ಅಯ್ಯ, ಆಚಾರವಿಲ್ಲದ ಜಂಗಮದಲ್ಲಿ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ
ಆಚಾರವಿಲ್ಲದ ಜಂಗಮದಲ್ಲಿ ಪಾದೋದಕಪ್ರಸಾದವ ಕೊಳಲಾಗದು. ಆಚಾರವಿಲ್ಲದ ಜಂಗಮ[ವ] ದೇವರೆಂದು ಭಾವಿಸಲಾಗದು. `ಆಚಾರಶೂನ್ಯಂ ಚ ಭೂತಪ್ರಾಣೀ' ಎಂದುದಾಗಿ ಆಚಾರವಿಲ್ಲದ ಅನಾಮಿಕರ ಕೈಯಲ್ಲಿ ಪಾದೋದಕ ಪ್ರಸಾದ ಉಪದೇಶವ ಕೊಂಡವಂಗೆ ಅಘನಾಸ್ತಿಯಾಗದು
ಮುಂದೆ ಅಘೋರನರಕ ತಪ್ಪದು ಕಾಣಾ ಗುಹೇಶ್ವರಾ.