Library-logo-blue-outline.png
View-refresh.svg
Transclusion_Status_Detection_Tool

ಅಯ್ಯ, ಕ್ರಿಯಾಚಾರದಲ್ಲಿ ಮೋಹವುಳ್ಳಾತನ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಯ್ಯ
ಕ್ರಿಯಾಚಾರದಲ್ಲಿ ಮೋಹವುಳ್ಳಾತನ ಸದ್ಗುರುವೆಂಬೆ ನೋಡ. ಜ್ಞಾನಾಚಾರದಲ್ಲಿ ನೈಷೆ*ಯುಳ್ಳಾತನ ಸಚ್ಚಿದಾನಂದಲಿಂಗವೆಂಬೆ ನೋಡ. ಭಾವಾಚಾರದಲ್ಲಿ ಪ್ರೇಮವುಳ್ಳಾತನ ಪರಾತ್ಪರಜಂಗಮವೆಂಬೆ ನೋಡ. ಈ ತ್ರಿವಿಧಾಚಾರದಲ್ಲಿ ಕಾಂಕ್ಷೆಯುಳ್ಳಾತನ ನಿಜಶರಣನೆಂಬೆ ನೋಡ. ಇಂತು ಆಚಾರಸನ್ಮಾರ್ಗ ಗುರುಲಿಂಗಜಂಗಮಶರಣರೆ ಗುಹೇಶ್ವರಲಿಂಗಕ್ಕೆ ಮೋಕ್ಷಮಂದಿರವೆಂಬೆ ನೋಡಾ
ಚೆನ್ನಬಸವಣ್ಣಾ.