ಅಯ್ಯ, ತನುವಿನಾಸೆಯನಳಿದಾತನ ಸತ್ತುಚಿತ್ತಾನಂದನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಯ್ಯ
ತನುವಿನಾಸೆಯನಳಿದಾತನ ಸತ್ತುಚಿತ್ತಾನಂದನ ಗುರುವೆಂಬೆ. ಮನದ ಕಾಂಕ್ಷೆಯನಳಿದಾತನ ಸರ್ವಾಚಾರನ ಲಿಂಗವೆಂಬೆ ನೋಡಾ. ಭಾವದ ಭ್ರಮೆಯ ನಳಿದಾತನ ಷಟ್‍ಸ್ಥಲಜಂಗಮವೆಂಬೆ ನೋಡಾ. ಪ್ರಾಣನ ಪ್ರಪಂಚನಳಿದಾತನ ನಿರಾತಂಕನಿರಾಲಂಬ ನಿಷ್ಕಳಂಕನಿಜಶರಣನೆಂಬೆ ನೋಡಾ. ಈ ಚತುರ್ವಿಧ ಪಾಶವ ಗೆದ್ದಾತನ ಗುಹೇಶ್ವರಲಿಂಗವೆಂಬೆ ನೋಡಾ ಚೆನ್ನಬಸವಣ್ಣಾ.