Library-logo-blue-outline.png
View-refresh.svg
Transclusion_Status_Detection_Tool

ಅಯ್ಯ, ಮಣ್ಣಿಂಗೆ ಹೊಡೆದಾಡುವಾತನ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಯ್ಯ
ಮಣ್ಣಿಂಗೆ ಹೊಡೆದಾಡುವಾತನ ಗುರುವೆಂಬೆನೆ? ಆತ ಗುರುವಲ್ಲ. ಹೆಣ್ಣಿಂಗೆ ಹೊಡೆದಾಡುವಂತಾ [ಗೆ] ಲಿಂಗವೆಂಬೆನೆ ? ಅದು ಲಿಂಗವಲ್ಲ. ಹೊನ್ನಿಂಗೆ ಹೊಡೆದಾಡುವಾತನ ಜಂಗಮವೆಂಬೆನೆ ? ಆತ ಜಂಗಮವಲ್ಲ. ಈ ತ್ರಿವಿಧಮಲಕ್ಕೆ ಹೊಡೆದಾಡುವಾತನ ಶರಣನೆಂಬೆನೆ ? ಆತ ಶರಣನಲ್ಲ ನೋಡಾ. ಈ ವಿಚಾರವನರಿದು
ಮಲತ್ರಯಂಗಳ ಸರ್ವಾವಸ್ಥೆಯಲ್ಲಿ ಹೊದ್ದಲೀಯದೆ ಗೌರವ ಬುದ್ಧಿ ಲಿಂಗಲೀಯ ಜಂಗಮಾನುಭಾವ ಸರ್ವಾಚಾರಸಂಪತ್ತಿನಾಚರಣೆಯ ಶ್ರುತಿ_ಗುರು_ಸ್ವಾನುಭಾವದಿಂದರಿದು ಆಚರಿಸಿದಡೆ
ಗುಹೇಶ್ವರಲಿಂಗದಲ್ಲಿ ಪರಾತ್ಪರಗುರುಲಿಂಗಜಂಗಮಶರಣನೆಂಬೆ ನೋಡ ಜೆನ್ನಬಸವಣ್ಣ.