ಅಯ್ಯ, ಸದಾಚಾರಸದ್ಭಕ್ತಿಯಿಲ್ಲದ ಗುರುತ್ವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಯ್ಯ
ಸದಾಚಾರಸದ್ಭಕ್ತಿಯಿಲ್ಲದ ಗುರುತ್ವ ಉಂಟೇನೊ ಮರುಳೆ ? ಸದಾಚಾರಸದ್ಭಕ್ತಿಯಿಲ್ಲದ ನಿಜಲಿಂಗ ಉಂಟೇನೊ ಮರುಳೆ ? ಸದಾಚಾರಸದ್ಭಕ್ತಿಯಿಲ್ಲದ ನಿಜಜಂಗಮತ್ವ ಉಂಟೇನೊ ಮರುಳೆ ? ಸದಾಚಾರಸದ್ಭಕ್ತಿಯಿಲ್ಲದ ಶರಣತ್ವ ಉಂಟೇನೊ ಮರುಳೆ? ಗುಹೇಶ್ವರ ಲಿಂಗ[ದಲ್ಲಿ] ಸದಾಚಾರಸದ್ಭಕ್ತಿಯಿಂದಲ್ಲದೆ ನಿಜಮೋಕ್ಷವುಂಟೆ ಚೆನ್ನಬಸವಣ್ಣಾ ?