ವಿಷಯಕ್ಕೆ ಹೋಗು

ಅಯ್ಯ ! ಕಾಮ,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ! ಕಾಮ
ಕ್ರೋಧ
ಲೋಭ
ಮೋಹ
ಮದ
ಮತ್ಸರ
ಕ್ಷುತ್ತು
ಪಿಪಾಸೆ
ಶೋಕ
ಮೋಹ
ಜನನ ಮರಣಂಗಳ
ಅಡಿಮೆಟ್ಟಿ ನಿಂದು
ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಮಾಡಿ ಶಿವನನಂತ ಲೀಲೆಗಳನರ್ಚಿಸಿ ಫಲ_ಪದ_ಮೋಕ್ಷಂಗಳ ಪಡೆಯಬೇಕೆಂಬ ಬಯಕೆಯನುಳಿದು
ಅಂತರಂಗದ ಜ್ಞಾನ
ಬಹಿರಂಗದ ಸತ್ಕ್ರಿಯಾಚಾರಂಗಳಲ್ಲಿ ದೃಢ ಚಿತ್ತದಿಂದ ನಿಂದು
ಹಿಂದೆ ಹೇಳಿದ ಸದ್ಭಕ್ತ_ಮಹೇಶ್ವರ_ಪ್ರಸಾದಿ_ಪ್ರಾಣಲಿಂಗಿ_ಶರಣಸ್ಥಲಂಗಳನೊಳಗು ಮಾಡಿಕೊಂಡು
ಪರಾತ್ಪರ ನಿತ್ಯತೃಪ್ತಾನಂದ ಮೂರ್ತಿಯಾಗಿ
ಝಗಝಗಿಸುವ ನಿಜೈಕ್ಯನಂತರಂಗದಲ್ಲಿ ಚಿದ್ರೂಪಲೀಲೆಯಿಂ ಸಾಕಾರ_ನಿರಾಕಾರ; ಸಕಲ_ನಿಃಕಲತತ್ತ್ವಂಗಳನೊಳಕೊಂಡು
ಹದಿಮೂರು ಸ್ಥಲಂಗಳ ಗರ್ಭೀಕರಿಸಿಕೊಂಡು
ಎಂಟುನೂರ ಆರುವತ್ತನಾಲ್ಕು ಮಂತ್ರಮಾಲಿಕೆಗಳ ಪಿಡಿದುಕೊಂಡು
ಇಪ್ಪತ್ತುನಾಲ್ಕು ಸಕೀಲಗರ್ಭದಿಂ ಜ್ಯೋತಿ ಜ್ಯೋತಿ ಕೂಡಿ ಭಿನ್ನ ದೋರದ ಹಾಂಗೆ ಏಕಸ್ವರೂಪಿನಿಂದ ವೇದಸ್ವರೂಪ ಮಹಾಲಿಂಗವಾಗಿ ನೆಲಸಿರ್ಪುದು ನೋಡ ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.