ವಿಷಯಕ್ಕೆ ಹೋಗು

ಅಯ್ಯ ! ಗಮನಿಯಲ್ಲ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ! ಗಮನಿಯಲ್ಲ ನಿರ್ಗಮನಿಯಲ್ಲ ನೋಡ ! ನಿರವಯ ಶೂನ್ಯಲಿಂಗಮೂರ್ತಿ ಸುಚಿಂತನಲ್ಲ
ದುಶ್ಚಿಂತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಕುಟಿಲನಲ್ಲ ಕುಹಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಬೂಟಕನಲ್ಲ ಚಾಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ದಿಟದವನಲ್ಲ ಸಟೆಯವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಸಂಚಲನಲ್ಲ ವಂಚಲನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಪ್ರಪಂಚನಲ್ಲ ಪ್ರಮಾಣನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಗಣಿತನಲ್ಲ ಅಗಣಿತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಖಂಡಿತನಲ್ಲ ಅಖಂಡಿತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಚರಿತನಲ್ಲ ಅಚರಿತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಭರಿತನಲ್ಲ ಸುರಿತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಚಾಡಿಯಲ್ಲ ಚಿತಾಲನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಗಾರುಡನಲ್ಲ (ಗಾಡಿಗನಲ್ಲ?) ಕುರೂಪನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಮರುಳನಲ್ಲ ದುರುಳನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಆಶಕನಲ್ಲ ಪಾಶಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಇಂತು ಉಭಯವಳಿದುಳಿದು ಸಂಗನ ಬಸವಣ್ಣನ ಅರುವಿನ ಮಧ್ಯದಲಿ ಬೆಳಗುವ ಜ್ಯೋತಿ ತಾನೆ ನೋಡ ! ಗುಹೇಶ್ವರಲಿಂಗವು ಚೆನ್ನಬಸವಣ್ಣ.