ವಿಷಯಕ್ಕೆ ಹೋಗು

ಅಯ್ಯ ! ದೀಕ್ಷಾಗುರು,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ! ದೀಕ್ಷಾಗುರು
ಶಿಕ್ಷಾಗುರು
ಜ್ಞಾನಗುರುಗಳೆಂಬ ತ್ರಿವಿಧ ಗುರುಗಳು: ಕ್ರಿಯಾಲಿಂಗ
ಜ್ಞಾನಲಿಂಗ
ಭಾವಲಿಂಗವೆಂಬ ತ್ರಿವಿಧ ಲಿಂಗಗಳು: ಸ್ವಯ
ಚರ
ಪರವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಆಚಾರಲಿಂಗದಲ್ಲಿ ಸಂಬಂಧವು. ಕ್ರಿಯಾಗಮ
ಭಾವಾಗಮ
ಜ್ಞಾನಾಗಮವೆಂಬ ತ್ರಿವಿಧ ಲಿಂಗಗಳು
ಸಕಾಯ
ಆಕಾಯ
ಪರಕಾಯವೆಂಬ ತ್ರಿವಿಧ ಗುರುಗಳು: ಧರ್ಮಾಚಾರ
ಭಾವಾಚಾರ
ಜ್ಞಾನಾಚಾರವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಗುರುಲಿಂಗದಲ್ಲಿ ಸಂಬಂಧವು. ಕಾಯಾನುಗ್ರಹ
ಇಂದ್ರಿಯಾನುಗ್ರಹ
ಪ್ರಾಣಾನುಗ್ರಹವೆಂಬ ತ್ರಿವಿಧ ಗುರುಗಳು ಕಾಯಾರ್ಪಿತ
ಕರಣಾರ್ಪಿತ
ಭಾವಾರ್ಪಿತವೆಂಬ ತ್ರಿವಿಧ ಲಿಂಗಗಳು: ಶಿಷ್ಯ
ಶುಶ್ರೂಷ
ಸೇವ್ಯವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಶಿವಲಿಂಗದಲ್ಲಿ ಸಂಬಂಧವು. ಈ ಮೂರು ಸ್ಥಲವು ಅನಾದಿಭಕ್ತನ ಮಾರ್ಗಕ್ರಿಯಾ ಸ್ವರೂಪು. ಜೀವಾತ್ಮ
ಅಂತರಾತ್ಮ
ಪರಮಾತ್ಮವೆಂಬ ತ್ರಿವಿಧಲಿಂಗಗಳು: ನಿರ್ದೇಹಾಗಮ
ನಿರ್ಭಾವಾಗಮ
ನಷ್ಟಾಗಮವೆಂಬ ತ್ರಿವಿಧ ಗುರುಗಳು; ಆದಿಪ್ರಸಾದಿ
ಅಂತ್ಯಪ್ರಸಾದಿ
ಸೇವ್ಯ ಪ್ರಸಾದಿಯೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಜಂಗಮಲಿಂಗದಲ್ಲಿ ಸಂಬಂಧವು_ ದೀಕ್ಷಾಪಾದೋದಕ
ಶಿಕ್ಷಾಪಾದೋದಕ
ಜ್ಞಾನಪಾದೋದಕವೆಂಬ ತ್ರಿವಿಧ ಲಿಂಗಂಗಳು
ಕ್ರಿಯಾನಿಷ್ಪ
ಭಾವನಿಷ್ಪ
ಜ್ಞಾನನಿಷ್ಪಯೆಂಬ ತ್ರಿವಿಧ ಗುರುಗಳು; ಪಿಂಡಾಕಾಶ
ಬಿಂದ್ವಾಕಾಶ
ಮಹದಾಕಾಶವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಪ್ರಸಾದಲಿಂಗದಲ್ಲಿ ಸಂಬಂಧವು. ಕ್ರಿಯಾಪ್ರಕಾಶ
ಭಾವಪ್ರಕಾಶ
ಜ್ಞಾನಪ್ರಕಾಶವೆಂಬ ತ್ರಿವಿಧ ಲಿಂಗಗಳು ಕೊಂಡದ್ದು ಪ್ರಸಾದ
ನಿಂದದ್ದು ಓಗರ
ಚರಾಚರನಾಸ್ತಿಯೆಂಬ ತ್ರಿವಿಧ ಗುರುಗಳು; ಬಾಂಢಸ್ಥಲ
ಭಾಜನಸ್ಥಲ
ಅಂಗಲೇಪನಸ್ಥಲವೆಂಬ ತ್ರಿವಿಧ ಜಂಗಮವು_ ಈ ಒಂಬತ್ತು ಮಹಾಲಿಂಗದಲ್ಲಿ ಸಂಬಂಧವು. ಈ ಮೂರು ಸ್ಥಲವು ಅನಾದಿ ಜಂಗಮದ ಮೀರಿದ ಕ್ರಿಯಾ ಸ್ವರೂಪವು. ಈ ಉಭಯಂ ಕೂಡಲು ಐವತ್ತುನಾಲ್ಕು ಸ್ಥಲಂಗಳಾದವು. ಮುಂದುಳಿದ ಮೂರು ಸ್ಥಲಂಗಳಲ್ಲಿ ಭಾವಾಭಾವನಷ್ಟಸ್ಥಲವೆ ಮೂಲ ಗುರುಸ್ವರೂಪವಾಗಿ ಹದಿನೆಂಟು ಗುರುಸ್ಥಲಂಗಳನೊಳಕೊಂಡು ಕ್ರಿಯಾಗುರುಲಿಂಗ ಜಂಗಮ ಸ್ವರೂಪವಾದ ಇಷ್ಟಮಹಾಲಿಂಗದ ಅಧೋಪೀಠಿಕೆಯೆಂಬ ಹಲ್ಲೆಯಲ್ಲಿ ಸ್ಪರ್ಶನೋದಕ
ಅವಧಾನೋದಕ
ಗುರುಪಾದೋದಕ
ಅಪ್ಯಾಯನಪ್ರಸಾದ
ಸಮಯಪ್ರಸಾದ
ಗುರುಪ್ರಸಾದ ಆದಿ ಪ್ರಸಾದ
ನಿಚ್ಚಪ್ರಸಾದವಾಗಿ ತೆರಹಿಲ್ಲದೆ ಒಪ್ಪುತ್ತಿರ್ಪುದು ನೋಡ ! ಜ್ಞಾನಶೂನ್ಯಸ್ಥಲವೆ ಮೂಲ ಜಂಗಮಸ್ವರೂಪವಾಗಿ ಹದಿನೆಂಟು ಚರಸ್ಥಲಂಗಳನೊಳಕೊಂಡು ಮಹಾಜ್ಞಾನಗುರುಲಿಂಗಜಂಗಮ ಸ್ವರೂಪವಾದ ಇಷ್ಟಮಹಾಲಿಂಗದ ಜಲರೇಖೆಯನ್ನುಳ್ಳ ಪಾನಿವಟ್ಟಲಲ್ಲಿ ಪರಿಣಾಮೋದಕ
ನಿರ್ನಾಮೋದಕ
ಜಂಗಮಪಾದೋದಕ
ನಿತ್ಯೋದಕ
ಸಮತಾಪ್ರಸಾದ
ಪ್ರಸಾದಿಯ ಪ್ರಸಾದ
ಜಂಗಮ ಪ್ರಸಾದ
ಸದ್ಭಾವ ಪ್ರಸಾದ
ಜ್ಞಾನಪ್ರಸಾದ
ಸೇವ್ಯ ಪ್ರಸಾದ
ಅಚ್ಚ ಪ್ರಸಾದವಾಗಿ ತೆರಹಿಲ್ಲದೆ ಒಪ್ಪುತಿರ್ಪುದು ನೋಡ ! ಸ್ವಯ ಪರವರಿಯದ ಸ್ಥಲವೆ ಮೂಲಲಿಂಗಸ್ವರೂಪವಾಗಿ ಹದಿನೆಂಟು ಲಿಂಗಸ್ಥಲಂಗಳನೊಳಕೊಂಡು ಜ್ಞಾನಗುರುಲಿಂಗ ಜಂಗಮ ಸ್ವರೂಪವಾದ ಇಷ್ಟಮಹಾಲಿಂಗದ ಉನ್ನತವಾದ ಗೋಲಕದಲ್ಲಿ ಅಪ್ಯಾಯನೋದಕ
ಹಸ್ತೋದಕ
ಲಿಂಗಪಾದೋದಕ
ಪಂಚೇಂದ್ರಿ[ಯ] ವಿರಹಿತಪ್ರಸಾದ
ಕರಣಚತುಷ್ಟಯವಿರಹಿತ ಪ್ರಸಾದ
ಲಿಂಗಪ್ರಸಾದ ಅಂತ್ಯಪ್ರಸಾದ ಸಮಯಪ್ರಸಾದವಾಗಿ ತೆರಹಿಲ್ಲದೆ ಒಪ್ಪುತ್ತಿರ್ಪುದು ನೋಡ ! ಇಂತಪ್ಪ ಲಿಂಗಜಂಗಮದ ಪಾದೋದಕ ಪ್ರಸಾದವ ಸ್ವೀಕರಿಸಿದಂಥ ಜಂಗಮಭಕ್ತರಾದ ಸಹಜಭಕ್ತರೆ ಪ್ರಸಾದಪಾದೋದಕ ಸಂಬಂಧಿಗಳು. ಇವರು ಸ್ವೀಕರಿಸಿದಂಥ ಪಾದೋದಕವೆ ನೇತ್ರದಲ್ಲಿ ಕರುಣಜಲ; ವಾಕಿನಲ್ಲಿ ವಿನಯಜಲ; ಅಂತರಂಗದಲ್ಲಿ ಸಮತಾಜಲ_ ಇಂತೀ ತ್ರಿವಿಧೋದಕವೆ ಘಟ್ಟಿಗೊಂಡು ಸಾಕಾರವಾಗಿ
ತಿಳಿದುಪ್ಪ ಹೆರೆದುಪ್ಪವಾದಂತೆ ಇಷ್ಟ ಮಹಾಲಿಂಗಕ್ಕೆ ತ್ಯಾಗಾಂಗವಾದ ಶುದ್ಧ ಪ್ರಸಾದವಾಗಿರ್ಪುದಯ್ಯ; ಪ್ರಾಣಲಿಂಗಕ್ಕೆ ಭೋಗಾಂಗವಾದ ಸಿದ್ಧ ಪ್ರಸಾದವಾಗಿರ್ಪುದಯ್ಯ. ಭಾವಲಿಂಗಕ್ಕೆ ಯೋಗಾಂಗವಾದ ಪ್ರಸಿದ್ಧ ಪ್ರಸಾದವಾಗಿರ್ಪುದಯ್ಯ. ಇಂತೀ ತ್ರಿವಿಧಪ್ರಸಾದಪಾದೋದಕವೆ ಶರಣನ ಶುದ್ಧ ಪ್ರಸಾದವೆ ಜಿಹ್ವೆಯಲ್ಲಿ ಅಚ್ಚಪ್ರಸಾದವಾಗಿರ್ಪುದಯ್ಯ ಸಿದ್ಧಪ್ರಸಾದವೆ ಪಾದದಲ್ಲಿ ಸಮಯ ಪ್ರಸಾದವಾಗಿರ್ಪುದಯ್ಯ ಇಂತಪ್ಪ ಶರಣಸ್ವರೂಪವಾದ ಜ್ಞಾನಲಿಂಗಜಂಗಮದ ತೀರ್ಥಪ್ರಸಾದ ಸ್ವರೂಪವನ್ನು ಅರಿಯದೆ
ಕ್ರಿಯಾ `ಜಂಗಮಲಿಂಗ'ದ ತೀರ್ಥಪ್ರಸಾದವನ್ನು ತೆಗೆದುಕೊಳ್ಳಬಹುದು. ಜ್ಞಾನಲಿಂಗಜಂಗಮ ತೀರ್ಥಪ್ರಸಾದವನ್ನು ತೆಗೆದುಕೊಳ್ಳಲಾಗದು ಎಂಬ ಅಜ್ಞಾನಿಗಳ ಎನಗೆ ತೋರದಿರ ! ಗುಹೇಶ್ವರ !