ಅಯ್ಯ ! ಯಂತ್ರಗಾರನಲ್ಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಯ್ಯ ! ಯಂತ್ರಗಾರನಲ್ಲ ಮಂತ್ರಗಾರನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಕುಳನಲ್ಲ ವ್ಯಾಕುಳನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಪಾಶನಲ್ಲ ಪಾಶಬದ್ಧನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಕಾಲನಲ್ಲ ಕರ್ಮನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಅಂಗವಿಕಾರಿಯಲ್ಲ ಮನವಿಕಾರಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಸೂಯನಲ್ಲ ಅಸೂಯನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಜಪದವನಲ್ಲ ತಪದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ವೈದಿಕನಲ್ಲ ವ್ಯವಹಾರಿಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಸಿದ್ಧನಲ್ಲ ಪ್ರಸಿದ್ಧನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಸುಖಿಯಲ್ಲ ದುಃಖಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಪಾಪಿಯಲ್ಲ ಕೋಪಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಕರ್ಮಿಯಲ್ಲ ಧರ್ಮಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ ಇಂತು ಉಭಯವಳಿದು ಸಂಗನಬಸವಣ್ಣನ ಪಂಚಪರುಷಮೂರ್ತಿಯಾಗಿ ಬೆಳಗುವ ಜ್ಯೋತಿ ತಾನೆ ನೋಡ ಗುಹೇಶ್ವರಲಿಂಗವು
ಚೆನ್ನಬಸವಣ್ಣ.