ವಿಷಯಕ್ಕೆ ಹೋಗು

ಅಯ್ಯ ಅಷ್ಟತನುವಿನ ಭ್ರಷ್ಟಮದಂಗಳ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ಅಷ್ಟತನುವಿನ ಭ್ರಷ್ಟಮದಂಗಳ ತೂರಿ
ಅಷ್ಟಭೋಗವನಳಿದು
ಅಷ್ಟೈಶ್ವರ್ಯಗಳ ನೀಗಿ
ಅಷ್ಟಭಕ್ತಿಯನರಿದು
ಅಷ್ಟಾವರಣವ ತಿಳಿದು
ಅಷ್ಟವಿಧಸಕೀಲವ ಭೇದಿಸಿ ನೋಡಿ
ಅಷ್ಟಾಚಾರಗಳ ಕಂಡು
ನಿಷೆ* ನಿಜದಲ್ಲಿ ನಿಂದು
ಸಗುಣಾನಂದಲೀಲಾಮೂರ್ತಿಯಾಗಿ ಪ್ರಜ್ವಲಿಸುವ ಸದ್ಭಕ್ತ ಶರಣನಂತರಂಗದಲ್ಲಿ ಪರಿಪೂರ್ಣಲೀಲೆಯಿಂ ಮೂವತ್ತಾರು ತತ್ವಂಗಳನೊಳಕೊಂಡು
ಇಪ್ಪತ್ತು ನಾಲ್ಕು ಸ್ಥಲಂಗಳ ಗರ್ಭೀಕರಿಸಿಕೊಂಡು ಸಾವಿರದೇಳುನೂರ ಇಪ್ಪತ್ತೆಂಟು ಮಂತ್ರಮಾಲೆಗಳ ಪಿಡಿದು
ಇಪ್ಪತ್ತುನಾಲ್ಕು ಸಕೀಲ ಗರ್ಭದಿಂ ``ಭಕ್ತದೇಹಿಕದೇವಾನಾಂ ದೇವದೇಹಿಕ ಭಕ್ತಯೋಃ ಎಂಬ ವಾಂಛೆಯಿಂ ಕ್ಷೀರದೊಳು ಘೃತವಡಗಿದಂತೆ ಪಂಚಾಚಾರಮೂರ್ತಿ ಆಚಾರಲಿಂಗವಾಗಿ ನೆಲಸಿರ್ಪುದು ನೋಡ ! ಗುಹೇಶ್ವರಲಿಂಗವು ಚೆನ್ನಬಸವಣ್ಣ.