ವಿಷಯಕ್ಕೆ ಹೋಗು

ಅಯ್ಯ ಎತ್ತಿದ (ಇಕ್ಕಿದ?)

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಯ್ಯ ಎತ್ತಿದ (ಇಕ್ಕಿದ?) ಮಣಿ ಮುಕುಟದ ಮೇಲೆ ಸುತ್ತಿದ ನಾಗಭೂಷಣದ ಪಡೆಯೊಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ಕರೋಟಿಮಾಲೆಯೊಳಗಿಪ್ಪ ರುದ್ರರು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಇಕ್ಕಿದ ರುಂಡಮಾಲೆಯೊಳಗಿಪ್ಪ ಮುಂಡಧಾರಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಉಟ್ಟ ಗಜಚರ್ಮದೊಳಗಿಪ್ಪ ಋಷಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಖಟ್ವಾಂಗದೊಳಗಿಪ್ಪ ಮನುಮುನಿಗಳು ಒಂದು ಕೋಟಿ ಶಿವನಿಪ್ಪ ನೆಲೆಯನಾರೂ ಅರಿಯರಯ್ಯ. ಗಂಗೆ ಗೌರಿ ಭೃಂಗಿ ಮೊದಲಾಗಿ ಶಿವನಿಪ್ಪ ನೆಲೆಯನರಿಯರು
ಗುಹೇಶ್ವರ ನಿಮ್ಮ ಶರಣ ಸಂಗನಬಸವಣ್ಣ ಬಲ