ವಿಷಯಕ್ಕೆ ಹೋಗು

ಅಯ್ಯ ತತ್ತ್ವ ವಿತತ್ತ್ವಗಳಿಲ್ಲದಂದು,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ತತ್ತ್ವ ವಿತತ್ತ್ವಗಳಿಲ್ಲದಂದು
ಪ್ರಕೃತಿ ಪುರುಷರಿಲ್ಲದಂದು
ಜೀವ_ಪರಮರೆಂಬ ಭಾವ ತಲೆದೋರದಂದು
ಏನೂ ಏನೂ ಇಲ್ಲದಂದು ಬಯಲು ಬಲಿದು ಒಂದು ಬಿಂದುವಾಯಿತ್ತು ನೋಡಾ. ಆ ಬಿಂದು ಅಕ್ಷರತ್ರಯದ ಗದ್ದುಗೆಯಲ್ಲಿ ಕುಳ್ಳಿರಲು ಓಂಕಾರ ಉತ್ಪತ್ತಿಯಾಯಿತ್ತು. ಆ [ಓಂಕಾರದ] ನಾದದಲ್ಲಿ ಮೂರ್ತಿಗೊಂಡನೊಬ್ಬ ಶರಣ. ಆ ಶರಣನಿಂದಾಯಿತ್ತು ಪ್ರಕೃತಿ
ಆ ಪ್ರಕೃತಿಯಿಂದಾಯಿತ್ತು ಲೋಕ. ಈ ಲೋಕ ಲೌಕಿಕವನತಿಗಳೆದು ನಿಜದಲ್ಲಿ ನಿವಾಸಿಯಾಗಿಪ್ಪ
ಗುಹೇಶ್ವರನ ಶರಣ ಚೆನ್ನಬಸವಣ್ಣನ ಘನವನು ಬಸವಣ್ಣನ ಕೃಪೆಯಿಂದಲರಿದು ನಮೋ ನಮೋ ಎನುತಿರ್ದೆನು.