Library-logo-blue-outline.png
View-refresh.svg
Transclusion_Status_Detection_Tool

ಅಯ್ಯ ಸತ್ಕ್ರಿಯಾಸಮ್ಯಜ್ಞಾನವುಂಟಾದಡೆ ಸದಾಚಾರಸದ್ಭಕ್ತಿ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಯ್ಯ ಸತ್ಕ್ರಿಯಾಸಮ್ಯಜ್ಞಾನವುಂಟಾದಡೆ ಸದಾಚಾರಸದ್ಭಕ್ತಿ ಉಂಟೆಂಬೆ. ಸದಾಚಾರ ಸದ್ಭಕ್ತಿ ಸತ್ಕ್ರಿಯಾ ಸಮ್ಯಜ್ಞಾನ [ಸತ್ಯ] ನಡೆನುಡಿ ಒಂದಾದಡೆ ಆದಿ_ಅನಾದಿಯಿಂದತ್ತತ್ತ ಮೀರಿ ತೋರುವ
ಪರಿಪೂರ್ಣ ಪರಮಾನಂದ ಪರಬ್ರಹ್ಮ ಗುರುಲಿಂಗಜಂಗಮವೆಂಬೆ ನೋಡಾ. ಇಂತು_ಸದಾಚಾರ
ಸದ್ಭಕ್ತಿ
ಸತ್ಕ್ರಿಯಾ
ಸಮ್ಯಜ್ಞಾನ
ಸತ್ಯನಡೆ ನುಡಿಯಿಲ್ಲವಾದಡೆ ಗುಹೇಶ್ವರಲಿಂಗಕ್ಕೆ ದೂರ ಕಾಣಾ ಚೆನ್ನಬಸವಣ್ಣ.