ಅಯ್ಯ ಸದಾಚಾರಸದ್ಭಕ್ತಿಯಿಲ್ಲದ ಗುರುವು

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಯ್ಯ ಸದಾಚಾರಸದ್ಭಕ್ತಿಯಿಲ್ಲದ ಗುರುವು ನರಜೀವಿ. ಆತನಿಂದ ಹುಟ್ಟಿದ ಲಿಂಗಾಂಗವೆರಡು ಜಡಜೀವಿ. ಅವರಿಬ್ಬರಲ್ಲಿ ಹೊಕ್ಕು ಕೊಟ್ಟು ಕೊಂಬುವ ಜಂಗಮ ಭೂತಪ್ರಾಣಿ. ಈ ನರಜೀವಿ
ಜಡಜೀವಿ
ಭೂತಪ್ರಾಣಿಗಳಿಗೆ ಕೊಟ್ಟುಕೊಂಬ ಭಕ್ತಂಗೆ ಏಳನೆಯ ಪಾತಕ ಬಿಡದು ಕಾಣಾ. ಗುಹೇಶ್ವರಲಿಂಗದ ಸದಾಚಾರಸದ್ಭಕ್ತಿಯಿಂದಲ್ಲದೆ ಮುಕ್ತಿಯಿಲ್ಲ ನೋಡಾ ಚೆನ್ನಬಸವಣ್ಣ.