ಅರಗಿನ ದೇಗುಲದಲ್ಲಿ ಒಂದು
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರಗಿನ ದೇಗುಲದಲ್ಲಿ ಒಂದು ಉರಿಯ ಲಿಂಗವ ಕಂಡೆ. ಮತ್ತೆ ದೇವರ ಪೂಜಿಸುವರಾರೂ ಇಲ್ಲ. ಉತ್ತರಾಪಥದ ದಶನಾಡಿಗಳಿಗೆ
ಸುತ್ತಿಮುತ್ತಿದ ಮಾಯೆ ಎತ್ತಲಿಕೆ ಹೋಯಿತ್ತು ? ಮರನೊಳಗಣ ಕಿಚ್ಚು ಮರನ ಸುಟ್ಟುದ ಕಂಡೆ ! ಗುಹೇಶ್ವರನೆಂಬ ಲಿಂಗ ಅಲ್ಲಿಯೆ ನಿಂದಿತ್ತು