ಅರಲುಗೊಂಡ ಕೆರೆಗೆ ತೊರೆಬಂದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಲುಗೊಂಡ ಕೆರೆಗೆ ತೊರೆಬಂದು ಹಾಯ್ದಂತಾಯಿತ್ತು. ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ. ಇಹದ ಸುಖ ಪರದ ಗತಿ ನಡೆದು ಬಂದಂತಾಯಿತ್ತು ನೋಡಾ ಎನಗೆ. ಚೆನ್ನಮಲ್ಲಿಕಾರ್ಜುನಯ್ಯಾ
ಗುರುಪಾದವ ಕಂಡು ಧನ್ಯಳಾದೆ ನೋಡಾ.