ಅರಳಿಯ ಮರದ ಮೇಲೆ ಒಂದು ಹಂಸೆ ಗೂಡನ್ನಿಕ್ಕಿತ್ತ ಕಂಡೆ. ಆ ಗೂಡಿನೊಳಗೆ ಒಬ್ಬ ಹೆಂಗೂಸು ಉಯ್ಯಾಲೆಯಾಡುತ್ತಿರ್ದಳು. ಉಯ್ಯಾಲೆ ಹರಿದು ಹೆಂಗೂಸು ನೆಲಕ್ಕೆ ಬಿದ್ದು ಸತ್ತಡೆ ಪ್ರಾಣಲಿಂಗವ ಕಾಣಬಹುದು ಕಾಣಾ ಗುಹೇಶ್ವರಾ.