ವಿಷಯಕ್ಕೆ ಹೋಗು

ಅರಸಿನಂತೆ ಬಂಟನೋ ಹನುಮರಾಯ

ವಿಕಿಸೋರ್ಸ್ದಿಂದ

ಅರಸಿನಂತೆ ಬಂಟನೋ ಹನುಮರಾಯ |ಪ|

ಅರಸಿನಂತೆ ಬಂಟನೆಂಬುದ ನೀನುಕುರುಹು ತೋರಿದೆ ಮೂರು ಲೋಕಕೆ ಹನುಮ |ಅ|

ಒಡೆಯನಂಬುಧಿಯೊಳು ಪೊಕ್ಕು ದೈತ್ಯನ ಕೊಂದುತಡೆಯದೆ ಶ್ರುತಿಯನಜಗಿತ್ತನೆಂದುಸಡಗರದಿಂದ ಶರಧಿಯ ದಾಂಟಿ ಮಹಿಜೆ ಪೆ-ರ್ಮುಡಿಯ ಮಾಣಿಕವ ರಾಘವಗಿತ್ತೆ ಹನುಮ |1|

ಮಂದರಧರ ಗೋವರ್ಧನ ಗಿರಿಯನು ಲೀಲೆ-ಯಿಂದಲಿ ನಿಂದು ನೆಗಹಿದನೆಂದುಸಿಂಧು ಬಂಧನಕೆ ಸಮಸ್ತ ಪರ್ವತಗಳತಂದು ನಳನ ಕೈಯೊಳಗಿತ್ತೆ ಹನುಮ |2|

ಸಿರಿಧರ ವರ ಕಾಗಿನೆಲೆಯಾದಿಕೇಶವಸುರರಿಗಮೃತವನು ಎರೆದನೆಂದುವರ ಸಂಜೀವನವ ತಂದು ಸೌಮಿತ್ರಿಗಂದುಎರೆದು ಶ್ರೀರಾಮನ ನಿಜದೂತನೆನಿಸಿದೆ ಹನುಮ |3|