ಅರಸುವಂಗೆ ಅರಸುವಂಗೆ ಅರಕೆ

ವಿಕಿಸೋರ್ಸ್ದಿಂದ



Pages   (key to Page Status)   


ಅರಸುವಂಗೆ ಅರಸುವಂಗೆ ಅರಕೆ ತಾನಹುದು
ದೇವಾ ! ಬಯಸುವಂಗೆ ಬಯಸುವಂಗೆ ಬಯಕೆ ತಾನಹುದು
ದೇವಾ ! ನೀವು ಭಾವಿಸಿದಂತಲ್ಲದೆ ಬೇರೊಂದಾಗಬಲ್ಲುದೆ ? ಈರೇಳು ಭುವನಸ್ಥಾಪ್ಯ ಪ್ರಾಣಿಗಳೆಲ್ಲ ನಿಮ್ಮಿಂದಲಾದವಾಗಿ. ನಿಮ್ಮಿಂದಲಹುದಾಗದೆಂಬ ಸಂದೇಹವುಂಟೆ ಬಸವಣ್ಣ ? ನಿಮ್ಮಡಿಗಳೆಂದಂತೆ
ನೆನೆದಂತೆ
ನೋಡಿದಂತೆ
ತಪ್ಪದು. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಪ್ರಭುವಿನಾಣೆ ಕಟ್ಟು ಗುಡಿಯನು.