ಅರಿದರಿದರಿದು ! ಸಮಗಾಣಿಸಬಾರದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅರಿದರಿದರಿದು ! ಸಮಗಾಣಿಸಬಾರದು

ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದಡೆ ಈಶ್ವರನು ಒಡೆಯಿಕ್ಕದೆ ಮಾಣುವನೆ ಪಾತ್ರ ಅಪಾತ್ರವೆಂದು ಕಂಡಡೆ ಶಿವನೆಂತು ಮೆಚ್ಚುವನು ಜೀವ ಜೀವಾತ್ಮವ ಸರಿಯೆಂದು ಕಂಡಡೆ ಸಮವೇದಿಸದಿಪ್ಪನೆ ಶಿವನು ತನ್ನ ಮನದಲ್ಲಿ `ಯತ್ರ ಜೀವಃ ತತ್ರ ಶಿವ'ನೆಂದು ಸರ್ವಜೀವದಯಾಪಾರಿಯಾದಡೆ 
ಕೂಡಲಸಂಗಮದೇವನು ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ