ವಿಷಯಕ್ಕೆ ಹೋಗು

ಅರಿದು ನೆನೆಯಲಿಲ್ಲ, ಮರೆದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿದು ನೆನೆಯಲಿಲ್ಲ
ಮರೆದು ಪೂಜಿಸಲಿಲ್ಲ. ತೆರಹಿಲ್ಲದ ಘನಕ್ಕೆ ಕುರುಹು ಮುನ್ನಿಲ್ಲ. ತನಗೆ ಗುರುವಿಲ್ಲ
ಗುರುವಿಗೆ ತಾನಿಲ್ಲ ಗುರುವಿಗೆ ಶಿಷ್ಯನು ಹೊಡವಡುವ ಕಾರಣ ಮುನ್ನಿಲ್ಲ. ಬಯಲ ಬಿತ್ತಲಿಲ್ಲ
ಬೆಳೆಯಲಿಲ್ಲ
ಒಕ್ಕಲಿಲ್ಲ
ತೂರಲಿಲ್ಲ
ಗುಹೇಶ್ವರನೆಂಬ ಲಿಂಗಕ್ಕೆ ಕುರುಹು ಮುನ್ನಿಲ್ಲ.