ವಿಷಯಕ್ಕೆ ಹೋಗು

ಅರಿದ ಶರಣಂಗೆ ಆಚಾರವಿಲ್ಲ,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿದ ಶರಣಂಗೆ ಆಚಾರವಿಲ್ಲ
ಆಚಾರವುಳ್ಳವಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ಸುಳುಹು ಜಗಕ್ಕೆ ವಿಪರೀತ
ಚರಿತ್ರವದು ಪ್ರಕಟವಲ್ಲ ನೋಡಾ ! ಸಂಸಾರಿ ಬಳಸುವ ಬಯಕೆಯನೆಂದೂ ಹೊದ್ದನು. ಸಟೆಯ ಹಿಡಿದು ದಿಟವ ಮರೆದು
ಇಲ್ಲದ ಲಿಂಗವನು ಉಂಟೆಂದು ಪೂಜಿಸುವರಾಗಿ ಆಚಾರವುಂಟು
ಆಚಾರವುಳ್ಳವಂಗೆ ಗುರುವುಂಟು
ಗುರುವುಳ್ಳವಂಗೆ ಲಿಂಗವುಂಟು
ಲಿಂಗಪೂಜಕಂಗೆ ಭೋಗವುಂಟು. ಈ ಬರಿಯ ಬಾಯ ಬಣ್ಣಕರೆಲ್ಲರೂ ಪೂಜಕರಾದರು. ಗುಹೇಶ್ವರಲಿಂಗವು ಅಲ್ಲಿ ಇಲ್ಲವೆಂಬುದನು; ಈ ವೇಷಲಾಂಛನರೆತ್ತಬಲ್ಲರು ಹೇಳಾ ಸಂಗನಬಸವಣ್ಣ.