ಅರಿಯದವರೊಡನೆ ಸಂಗವ ಮಾಡಿದಡೆ ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ. ಬಲ್ಲವರೊಡನೆ ಸಂಗವ ಮಾಡಿದಡೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ. ಚೆನ್ನಮಲ್ಲಿಕಾರ್ಜುನಯ್ಯಾ ನಿಮ್ಮ ಶರಣರ ಸಂಗವ ಮಾಡಿದಡೆ ಕರ್ಪುರ ಗಿರಿಯ ಉರಿಕೊಂಬಂತೆ.