ವಿಷಯಕ್ಕೆ ಹೋಗು

ಅರಿವನರಿದಹೆನೆಂಬುದು ಮರವೆ, ಮರಹ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿವನರಿದಹೆನೆಂಬುದು ಮರವೆ
ಮರಹ ಮರೆದಹೆನೆಂಬುದು ಮರವೆ
ಸಾಕಾರ ನಷ್ಟ ನಿರಾಕಾರ ದೃಷ್ಟವೆಂಬುದು ಭಾವದ ಬಳಲಿಕೆ. ಗುರುವೆಂಬುದು ಶಿಷ್ಯನೆಂದಲ್ಲಿಯೆ ಹೋಯಿತ್ತು. ಶಿಷ್ಯನೆಂಬುದು ಗುರುವೆಂದಲ್ಲಿಯೆ ಹೋಯಿತ್ತು. ನಿರ್ಣಯದಲ್ಲಿ ನಿಜೈಕ್ಯನಾದಹೆನೆಂದಡೆ
ಎಚ್ಚರಿಕೆಯಲ್ಲಿ ತಪ್ಪಿತ್ತು. ಸಹಜ ಸಂಬಂಧಕ್ಕೆ ಗುರುವಲ್ಲದೆ ಅಸಹಜಕ್ಕೆ ಗುರುವುಂಟೆ ? ಗುಹೇಶ್ವರಲಿಂಗದಲ್ಲಿ ಪರವೆಂದಲ್ಲಿ ಗುರುವುಂಟಲ್ಲದೆ ಸ್ವಯವೆಂದಲ್ಲಿ ನುಡಿಯಲಿಲ್ಲ.