ಅರಿವರತು ಮರಹುಗೆಟ್ಟು ತನ್ನಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ಅರಿವರತು ಮರಹುಗೆಟ್ಟು ತನ್ನಲ್ಲಿ ತಾನು ಸನ್ನಹಿತನಾದವಂಗೆ ದುಃಖಿಸುವರೆ ಹೇಳಾ ? ಶೋಕಿಸುವರೆ ಹೇಳಾ ? ಒಡಲಿಲ್ಲದಾತಂಗೆ ಎಡೆಯಲೊಂದು ಅಳಿವುಂಟೆಂದು ನುಡಿದು ಹೇಳುವ ಮಾತು ಭ್ರಾಂತು ನೋಡಾ ! ಎರಡಿಲ್ಲದ ಐಕ್ಯಂಗೆ ಒಳಹೊರಗಿಲ್ಲ ನೋಡಾ
ಗುಹೇಶ್ವರನ ಶರಣ ಅಜಗಣ್ಣಂಗೆ !