ಅರಿವಿಂದಲಾದ ಮರಹಿನ ಶಬ್ದವನರಿಯಲಾಗದು,
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರಿವಿಂದಲಾದ ಮರಹಿನ ಶಬ್ದವನರಿಯಲಾಗದು
ಅರಿದಡದಕ್ಕೆ ಭವವು (ಭಂಗವು?)
ಅರಿವರತು ಮರಹು ನಷ್ಟವಾಗಿ ಜ್ಞಾನ ಬೆಂದಲ್ಲಿ ನಿರ್ಣಯವೆಲ್ಲಿಯದು ? ಜ್ಞಾನದೊಳಗಣ ಬುದ್ಧಿಯ ಭಸ್ಮವಾಗಿ ಧರಿಸಿದಲ್ಲಿ ಕೂಡಲಚೆನ್ನಸಂಗಮದೇವರು ಸರ್ವನಿವಾಸಿ.