ಅರಿವಿನ ಹೃದಯ ಕಂದೆರೆಯಬೇಕೆಂದು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರಿವಿನ ಹೃದಯ ಕಂದೆರೆಯಬೇಕೆಂದು ಗುರುವೆಂದು ಕಲ್ಪಿಸಿಕೊಂಬರಲ್ಲದೆ
ಗುರುವೆಂದೆನಲುಂಟೆ ಶಿಷ್ಯಂಗೆ ? ಶಿಷ್ಯನೆಂದೆನಲುಂಟೆ ಗುರುವಿಂಗೆ ? ಗಮನಾಗಮನ ನಾಸ್ತಿಯಾದ ಲಿಂಗಕ್ಕೆ ಅಂಗವೆಲ್ಲಿಯದು ಹೇಳಾ ಗುಹೇಶ್ವರಾ ?