ಅರಿವುಗೆಟ್ಟು ಮರ ಕುರು

ವಿಕಿಸೋರ್ಸ್ದಿಂದ



Pages   (key to Page Status)   


ಅರಿವುಗೆಟ್ಟು ಮರ ಕುರು ಹಳಿದು ಭಾವಭ್ರಾಂತು ನಿಭ್ರಾಂತವಾದವರ ಕೈಯಲ್ಲಿ ಕರುಹನರಸುವರೆ ಹೇಳಾ ? ತಾನಳಿದು ತಾನುಳಿದು ತಾನುತಾನಾದ ನಿಜಶರಣಂಗೆ ಅಂತರಂಗದಲ್ಲಿ ಒಂದು ಅರಿವುಂಟೆ ? ಗುಹೇಶ್ವರನ ಶರಣರ ನಿಲವು ಕಾಯಗೊಂಡವರ ಕಣ್ಣಿಂಗೆ ಸಂದೇಹವಾಗಿಪ್ಪುದು
ನಿಸ್ಸಂದೇಹಿಗಳಿಗೆ ನಿಜವಾಗಿಪ್ಪುದು ನೋಡಾ ಮರುಳೆ