ವಿಷಯಕ್ಕೆ ಹೋಗು

ಅರಿವು ಅರಿವು ಎನುತಿಪ್ಪಿರಿ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅರಿವು ಅರಿವು ಎನುತಿಪ್ಪಿರಿ
ಅರಿವು ಸಾಮಾನ್ಯವೆ ? ಹಿಂದಣ ಹೆಜ್ಜೆಯ ನೋಡಿ ಕಂಡಲ್ಲದೆ ನಿಂದ ಹೆಜ್ಜೆಯನರಿಯಬಾರದು. ಮುಂದಣ ಹೆಜ್ಜೆಯಳಿದಲ್ಲದೆ
ಒಂದು ಪಾದ ನೆಲೆಗೊಳ್ಳದು. ನೆಲನ ಬಿಟ್ಟು ಆಕಾಶದಲ್ಲಿ ನಿಂದು ಮುಗಿಲೊಳಗೆ ಮಿಂಚಿದಲ್ಲದೆ ತಾನಾಗಬಾರದು._ಗುಹೇಶ್ವರನೆಂಬುದು ಬರಿದೆ ಬಹುದೆ ಹೇಳಿರೆ ?