ಅರಿವು ಉದಯವಾದಲ್ಲದೆ ಮರಹು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರಿವು ಉದಯವಾದಲ್ಲದೆ ಮರಹು ನಷ್ಟವಾಗದು. ಮರಹು ನಷ್ಟವಾದಲ್ಲದೆ ಅರಿವು ಸಯವಾಗದು. ಅರಿವು ಸಯವಾಗಿ ದೊರೆಕೊಂಡ ಬಳಿಕ; ಗುರುವಾರು ? ಲಿಂಗವಾರು ? ಆವುದು ಘನ
ಆವುದು ಕಿರಿದು ಹೇಳಾ ? ಗುಹೇಶ್ವರಲಿಂಗದಲ್ಲಿ ಅರಿದು ಮರೆದು ಉಪದೇಶವ ಹಡೆದಡೆ ಮುಂದೆ ನಿಜವೆಂತು ಸಾಧ್ಯವಪ್ಪುದು
ಹೇಳಾ ಮಡಿವಾಳ ಮಾಚಯ್ಯಾ ?