ಅರಿಸಿನವನೆ ಮಿಂದು, ಹೊಂದೊಡಿಗೆಯನೆ
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರಿಸಿನವನೆ ಮಿಂದು
ಹೊಂದೊಡಿಗೆಯನೆ ತೊಟ್ಟು
ದೇವಾಂಗವನುಟ್ಟೆನೆಲೆ ಪುರುಷ ಬಾರಾ
ಪುರುಷ ರತ್ನವೆ ಬಾರಾ. ನಿನ್ನ ಬರವೆನ್ನ ಅಸುವಿನ ಬರವಾದುದೀಗ
ಬಾರಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ
ನೀನು ಬಂದಹನೆಂದು ಬಟ್ಟೆಯ ನೋಡಿ ಬಾಯಾರುತಿರ್ದೆನು.