ವಿಷಯಕ್ಕೆ ಹೋಗು

ಅರೂಪು ಕಾಣಬಾರದು, ಪೂಜಿಸುವ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅರೂಪು ಕಾಣಬಾರದು
ಪೂಜಿಸುವ ಪರಿ ಇನ್ನೆಂತೊ ? ರೂಪಿಂಗೆ ಕೇಡುಂಟು ಪೂಜಿಸುವ ಪರಿ ಇನ್ನೆಂತೊ ? ಸಕಲ ನಿಷ್ಕಲ ಪೂಜೆಗೆ ಕಾರಣವಲ್ಲ ! ಇನ್ನೆಂತಯ್ಯಾ ಲಿಂಗವಂತರಿಗೆ ಪೂಜಿಸುವ ಪರಿ ? ಲಿಂಗದ ಪರಿ ಇನ್ನೆಂತಯ್ಯಾ ? ಅರಿಯಬಾರದ ಲಿಂಗವನು ಅರಿವಂತೆ ಮಾಡಿಕೊಟ್ಟನು ಶ್ರೀಗುರು. ಈ ಎರಡುವನರಿದು ಪೂಜಿಸಬೇಕು ಗುಹೇಶ್ವರಾ.