ವಿಷಯಕ್ಕೆ ಹೋಗು

ಅರೆಯ ಮೇಲಣ ಹುಲ್ಲೆಗೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅರೆಯ ಮೇಲಣ ಹುಲ್ಲೆಗೆ ಕೆಂಗರಿಯ ಬಾಣವ ತೊಟ್ಟವನೆ (ತೊಟ್ಟಡೆ ?) ತಪ್ಪದೆ ತಾಗಿತ್ತಲ್ಲಾ ! ಅದು ಒಂದೆ ಬಾಣದಲ್ಲಿ ಅಳಿಯಿತ್ತಲ್ಲಾ ! ನಾರಿ ಹರಿಯಿತ್ತು
ಬಿಲ್ಲು ಮುರಿಯಿತ್ತು. ಹುಲ್ಲೆ ಎತ್ತ ಹೋಯಿತ್ತು ಗುಹೇಶ್ವರಾ?