ಅರ್ಥರೇಖೆ ಇದ್ದಲ್ಲಿ ಫಲವೇನು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅರ್ಥರೇಖೆ ಇದ್ದಲ್ಲಿ ಫಲವೇನು, ಆಯುಷ್ಯರೇಖೆ ಇಲ್ಲದನ್ನಕ್ಕರ
ಹಂದೆಯ ಕೈಯಲ್ಲಿ ಚಂದ್ರಾಯುಧವಿದ್ದಲ್ಲಿ ಫಲವೇನು
ಅಂಧಕನ ಕೈಯಲ್ಲಿ ದರ್ಪಣವಿದ್ದು ಫಲವೇನು
ಮರ್ಕಟನ ಕೈಯಲ್ಲಿ ಮಾಣಿಕವಿದ್ದು ಫಲವೇನು
ನಮ್ಮ ಕೂಡಲಸಂಗನ ಶರಣರನರಿಯದವರ ಕೈಯಲ್ಲಿ ಲಿಂಗವಿದ್ದು ಫಲವೇನು !
ಶಿವಪಥವನರಿಯದನ್ನಕ್ಕ. 108