ಅಳಿವನಲ್ಲ ಉಳವನಲ್ಲ ಘನಕ್ಕೆ ಗಮನನಲ್ಲ ಮನಕ್ಕೆ ಸಾಧ್ಯನಲ್ಲ ತನ್ನ ತಪ್ಪಿಸಿ ಇದಿರನೊಪ್ಪಿಸಿಹೆನೆಂಬ ಭಿನ್ನಭಾವಿಯಲ್ಲ ಗುಹೇಶ್ವರನ ಶರಣ. ಅಜಗಣ್ಣನ ಅಂತಿಂತೆನಬಾರದು ಕೇಳಾ ತಾಯೆ.