ಅಳಿವರ ಉಳಿವರ ಸುಳಿವರ ನಿಲವ ನೋಡಿ ಕಂಡು ಸೋಂಕಿಲ್ಲದ ರೂಪಿಲ್ಲದ ನಿಜವ ಬಯಸುತ್ತಿದ್ದೆ ಕಾಲಿಲ್ಲದೆ ನಡೆಯುತ್ತಿದ್ದೆ ಕಣ್ಣಿಲ್ಲದೆ ನೋಡುತ್ತಿದ್ದೆ ಗುಹೇಶ್ವರಾ.