ಅಷ್ಟವಿಧಾರ್ಚನೆ ಷೋಡಶೋಪಚಾರಂಗಳನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಷ್ಟವಿಧಾರ್ಚನೆ ಷೋಡಶೋಪಚಾರಂಗಳನು

ಅರಸರಿಯದ ಬಿಟ್ಟಿ ಮಾಡುವೆನು. ಎನ್ನ ತಾಗಿದ ಸುಖವ ಜಂಗಮಕ್ಕರ್ಪಿಸಲರಿಯದ ಉಪಚಾರಿಯಾನು. ಸ್ಥಾವರ ಜಂಗಮವನರಿಯದ ಪೂಜಕ ನಾನು. ಮತ್ತೆ ನಾಚದೇ ಕೂಡಲಸಂಗಮದೇವಯ್ಯಾ 
ಜಂಗಮವೆನ್ನ ಪ್ರಾಣಲಿಂಗವೆಂಬೆನು. 380