ಅಷ್ಟಷಷ್ಟಿಯಾದವರೆಲ್ಲ ತೀರ್ಥವಾಸಿಗಳಪ್ಪರೆ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಷ್ಟಷಷ್ಟಿಯಾದವರೆಲ್ಲ ತೀರ್ಥವಾಸಿಗಳಪ್ಪರೆ ?
ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡುವರೆಲ್ಲ
ಲಿಂಗಾರ್ಚಕರಪ್ಪರೆ, ಅಯ್ಯಾ ?
ವೇಷವ ಹೊತ್ತು ಗ್ರಾಸಕ್ಕೆ ತಿರುಗುವ
ಈ ವೇಷ ದುರಾಚಾರಿಗಳ ಮೆಚ್ಚುವನೆ
ಕೂಡಲಸಂಗಮದೇವ ?