ಅಸ್ತಿ ಭಾತಿಯೆಂಬ ಎನ್ನ ಸತ್ಯದಲ್ಲಿ ನಾಮ ರೂಪೆಂಬ ಹುಸಿಯೆಂತು ಜನಿಸಿತೆಂದರಿಯೆನಯ್ಯಾ! ಇಲ್ಲದ ಹೆಸರುಳ್ಳ ಚಿತ್ತಾರದಂತೆ ದೇಹ ನಾಮವೀತೆರನೆಂದರಿಯದೆ ತೊಳಲಿ ಬಳಲುತ್ತಿದ್ದೆನಯ್ಯಾ ಕೂಡಲಚೆನ್ನಸಂಗಯ್ಯಾ ಸಂಸಾರಬಂಧನಯೆನಗಿದೇ ಕಂಡಯ್ಯಾ.